ಶಿರಹಟ್ಟಿ: ನಾಗರಮಡುವಿನಲ್ಲಿ ಅಂಗನವಾಡಿ ಮಕ್ಕಳಿಂದ ನೂತನ ಕಟ್ಟಡದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಡಾ. ಚಂದ್ರು ಲಮಾಣಿ
ಜಿಲ್ಲೆಯ ಶಿರಹಟ್ಟಿ ತಾಲೂಕಿನ ನಾಗರಮಡುವು ಗ್ರಾಮದಲ್ಲಿ ಪುಟಾಣಿ ಕಂದಮ್ಮಗಳ ಅಮೃತ ಹಸ್ತದಿಂದ ನೂತನ ಅಂಗನವಾಡಿ ಕಟ್ಟಡ ಕಾಮಗಾರಿಯ ಭೂಮಿ ಪೂಜೆಯನ್ನು ಶಾಸಕ ಡಾ. ಚಂದ್ರು ಲಮಾಣಿ ಮಾಡಿಸಿದ್ದಾರೆ. ಶಾಸಕರ ಈ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.