ಕಂಟೈನರ್ ಗೆ ಬೈಕ್ ಡಿಕ್ಕಿ: ಓರ್ವ ಸಾವು: ಮತ್ತೋರ್ವನಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಕ್ರಾಸ್ ಬಳಿ ನಿನ್ನೆ ರಾತ್ರಿ ಸುಮಾರು 11.30ರ ಸುಮಾರಿಗೆ ಯೂ ಟರ್ನ್ ಮಾಡುತ್ತಿದ್ದ ಕಂಟೈನರ್ ಗೆ ಬೈಕ್ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ನಲ್ಲಿದ್ದ ಇಬ್ಬರಲ್ಲಿ ಒಬ್ಬ ಇಸ್ತೂರು ಗ್ರಾಮದ ಲೋಕೇಶ್ (38) ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ಶ್ಯಾಕಲನದೇವಿಪುರ ಗ್ರಾಮದ 38 ವರ್ಷದ ದೃವಂತ್ ಕುಮಾರ್ ಗಂಭೀರ ಗಾಯಗೊಂಡಿದ್ದಾನೆ. ಗಾಯಾಳುಗೆ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.