ಸಿದ್ಧಾಪುರ: ಪಟ್ಟಣದಲ್ಲಿ ತಾಲ್ಲೂಕು ಕಸಾಪ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಶಾಸಕ ಭೀಮಣ್ಣ ನಾಯ್ಕ
ಸಿದ್ದಾಪುರ: ಡಿಸೆಂಬರ್ ೩೦ ರಂದು ಸೋಮವಾರ ನಡೆಯಲಿರುವ ಸಿದ್ದಾಪುರ ತಾಲೂಕಾ ೭ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಹಾಗೂ ಲಾಂಛನವನ್ನು ಮಂಗಳವಾರ ಸಂಜೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಬಿಡುಗಡೆಗೊಳಿಸಿದರು. ಎಲ್ಲರೂ ಸೇರಿ ಉತ್ಸಾಹದಿಂದ ಪಾಲ್ಗೊಳ್ಳುವ ಮೂಲಕ ಸಿದ್ದಾಪುರ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸೋಣ. ಪ್ರತಿಯೊಬ್ಬರು ತಮ್ಮ ಮನೆಯ ಕಾರ್ಯಕ್ರಮ ಎಂಬ ಮನೋಭಾವನೆಯಿಂದ ಪಾಲ್ಗೊಂಡು ಸಮ್ಮೇಳನ ಯಶಸ್ವಿಗೊಳಿಸಬೇಕೆಂದು ಭೀಮಣ್ಣ ನಾಯ್ಕ ಕರೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕಾ ಕಸಾಪ ಅಧ್ಯಕ್ಷ ಗೋಪಾಲ ಭಾಶಿ, ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಕೆ.ಜಿ.ನಾಗರಾಜ, ತಾಲೂಕಾ ದಂಡಾಧಿಕಾರಿ ಎಂ.ಆರ್. ಕುಲಕರ್ಣಿ ಇದ್ದರು