ಶಿರಸಿ: 15 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ : ಶಿರಸಿ ಹೊಸಮಾರುಕಟ್ಟೆ ಠಾಣೆಯಿಂದ ಕಾರ್ಯಾಚರಣೆ
ಶಿರಸಿ: 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜಾರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸಂಜಯ ಎಂ ಗಜಕೋಶ ಬಂಧಿತ ಆರೋಪಿ. ಆರೋಪಿಯು ಕಳೆದ 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜಾರಾಗದೇ ತಲೆಮರೆಸಿಕೊಂಡಿದ್ದ . ಮಾರುಕಟ್ಟೆ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಡಿವೈಎಸ್ಪಿ ಗೀತಾ ಪಾಟೀಲ್, ಸಿಪಿಐ ಶಶಿಕಾಂತ ವರ್ಮಾ ನೇತೃತ್ವದಲ್ಲಿ ಪ್ರದೀಪ್ ನಾಯಕ ಮತ್ತು ಮಲ್ಲೇಶಿ ಅರಳಗುಂಡಗಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.