ಹಿರಿಯೂರು:ಹಾಸ್ಟೆಲ್ ವಿದ್ಯಾರ್ಥಿಗಳು ಸಾಂಕ್ರಾಮಿಕ ರೋಗಗಳು ಹರಡದಂತೆ ವೈಯಕ್ತಿಕ ಸ್ವಚ್ಛತೆ ಕಡೆ ಗಮನಹರಿಸಬೇಕು ಎಂದುದ ನಿವೃತ್ತ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್ ಕರೆ ನೀಡಿದರು. ಹಿರಿಯೂರು ತಾಲ್ಲೂಕಿನ ಆರನಕಟ್ಟೆ ಗ್ರಾಮದ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯದಲ್ಲಿ ಬುಧವಾರ ಏರ್ಪಡಿಸಿದ್ದ ಆರೋಗ್ಯ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಭೌತಿಕ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ವಿದ್ಯಾರ್ಥಿಗಳು ಪ್ರತಿನಿತ್ಯ ಸ್ನಾನ ಮಾಡುವುದು, ಲಘು ವ್ಯಾಯಮ, ಬಟ್ಟೆ ಹಾಸಿಗೆ ಪರಿಕರ ಸ್ವಚ್ಚವಾಗಿ ಇಟ್ಟುಕೊಳ್ಳಲು ಅಸಡ್ಡೆ ತೋರಬಾರದು. ಕಜ್ಜೆ, ಇತರೆ ಚರ್ಮ ಕಾಯಿಲೆಗಳು ಒಬ್ಬರಿಂದ ಮತ್ತೊಬ್ಬರಿಗೆ ಹರಡದಂತೆ ನೋಡಿಕೊಳ್ಳಬೇಕು ಎಂದರು.