ಶಿವಮೊಗ್ಗ: ಕೃಷಿ-ಶಿಕ್ಷಣ ವಲಯ ಮತ್ತು ಸಾಮಾಜಿಕ ಭದ್ರತಾ ಯೋಜನೆ ಅಡಿ ಸಾಧನೆ ತೋರಲು ಶಿವಮೊಗ್ಗ ನಗರದಲ್ಲಿ ಸಂಸದ ಬಿ ವೈ ರಾಘವೇಂದ್ರ ಸೂಚನೆ
ಶಿವಮೊಗ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬ್ಯಾಂಕುಗಳ ಡಿ ಸಿ ಸಿ ಮತ್ತು ಡಿಎಲ್ ಆರ್ಸಿ ಸಭೆಯನ್ನು ಸೋಮವಾರ ಆಯೋಜಿಸಲಾಗಿದ್ದು ಸಂಸದ ಬಿ ವೈ ರಾಘವೇಂದ್ರ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಭೆಯಲ್ಲಿ ಬ್ಯಾಂಕುಗಳು ಆದ್ಯತಾ ವಲಯಗಳಾದ ಕೃಷಿ, ಶಿಕ್ಷಣ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳ ಅಡಿ ಉತ್ತಮ ಸಾಧನೆ ತೋರಬೇಕು. ಸಿಡಿ ಅನುಪಾತವನ್ನ ಹೆಚ್ಚಿಸಬೇಕು ಹಾಗೂ ಫಲಾನುಭವಿಗಳಿಗೆ ಅನುಕೂಲಕರವಾಗಿ ವರ್ತಿಸಬೇಕೆಂದು ಸಂಸದರು ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.