ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಚಾಲಕ ಹಾಗೂ ನಿರ್ವಾಹಕ ಹುದ್ದೆಗಳನ್ನು ರಾಜ್ಯ ಸರ್ಕಾದ ಭರ್ತಿ ಮಾಡಿಕೊಳ್ಳದ ಹಿನ್ನೆಲೆ ನೂರಾರು ನೊಂದ ಆಕಾಂಕ್ಷಿ ಅಭ್ಯರ್ಥಿಗಳು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು. ವಾಕರಸಾಸಂ ಆಯೋಜಿಸಿದ ಪರೀಕ್ಷೆಯನ್ನು ಈ ಅಭ್ಯರ್ಥಿಗಳು ಉತ್ತೀರ್ಣರಾಗಿ ಅನೇಕ ವರ್ಷಗಳು ಕಳೆದಿದ್ದರೂ ಸಹ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳದ ನಿಲುವನ್ನು ಖಂಡಿಸಿ ಹಾಗೂ ಕೂಡಲೇ ನೇಮಕಾತಿ ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹ ಮಾಡಲಾಯಿತು. ಈ ವೇಳೆ ಸಂಸದರು ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕರಾದ ಮಹೇಶ್ ಟೆಂಗಿನಕಾಯಿ, ಎಂ.ಆರ್.ಪಾಟೀಲ್, ವಾಕರಸಾಸಂ ಎಂಡಿ ಪ್ರಿಯಾಂಗಾ ಎಂ. ಹುಧಾ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಸೇರಿದಂತೆ