ವಿದ್ಯಾರ್ಥಿ ಪ್ರತಿಭೆಗಳು ರಾಷ್ಟ್ರದ ಪ್ರಗತಿಗೆ ಪೂರಕ : ಎಂಎಲ್ಸಿ ಗೋವಿಂದರಾಜ್ ಕೋಲಾರ ಜಿಲ್ಲೆಯ ಪ್ರತಿಭೆಗಳು ರಾಜ್ಯದಾದ್ಯಂತ ವಿವಿಧ ಕ್ಷೇತ್ರಗಳಲ್ಲಿ ಹೆಸರು ಮಾಡುತ್ತಿದ್ದು ಹಾಗೆಯೇ ವಿಜ್ಞಾನ ಕ್ಷೇತ್ರದಲ್ಲೂ ಇಲ್ಲಿರುವ ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಮೂಲಕ ರಾಜ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಿದ್ದು ಇವರು ತಂದೆ ತಾಯಿ ಮೆಚ್ಚುವ ಮತ್ತು ಸಮಾಜ ಮೆಚ್ಚುವ ರೀತಿಯಲ್ಲಿ ಕಾರ್ಯೋನ್ಮುಖರಾಗಿ ಉತ್ತಮ ಆದರ್ಶ ವಿದ್ಯಾರ್ಥಿಗಳಾಗಬೇಕೆಂದು ವಿಧಾನ ಪರಿಷತ್ತಿನ ಸದಸ್ಯ ಇಂಚರ ಗೋವಿಂದರಾಜು ಕರೆ ನೀಡಿದರು. ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಬೆಳ್ಳಗ್ಗೆ ೧೧ ಗಂಟೆಯಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಹಮ್ಮಿಕೊಂಡಿದ್ದ ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಜ್ಯಪ್ರಶಸ್ತಿ ಪಡೆ