ಗದಗ: ನಗರದಲ್ಲಿ ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
Gadag, Gadag | Jun 2, 2025 ಸ್ವಾತಂತ್ರ್ಯ ನಂತರ ದೇಶದಲ್ಲಿ ಅತ್ಯಂತ ಯಶಸ್ಸು ಕಂಡ ಸರ್ಕಾರದಿಂದ ಅನುಷ್ಟಾನಿತ ಪಂಚ ಗ್ಯಾರಂಟಿ ಯೋಜನೆಗಳು ಅರ್ಹವಿರುವ ಕಟ್ಟ ಕಡೇಯ ಫಲಾನುಭವಿಗಳಿಗೆ ಒದಗಬೇಕು ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಹೇಳಿದರು. ನಗರದ ಎಸಿ ಆವರಣದಲ್ಲಿರುವ ತಾಲೂಕ ಗ್ಯಾರಂಟಿ ಯೋಜನೆಗಳ ಕಾರ್ಯಲಯದಲ್ಲಿ ಸೋಮವಾರ ಜರುಗಿದ ಗದಗ ತಾಲೂಕ ಮಟ್ಟದ ಗ್ಯಾರಂಟಿ ಸಮಿತಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.