ನಂಜನಗೂಡು: ಸೂರಹಳ್ಳಿ ಗ್ರಾಮದಲ್ಲಿ ಅರಣ್ಯ ಅಧಿಕಾರಿಗಳ ಯಶಸ್ವಿ ಕಾರ್ಯಾಚರಣೆ; ಬಲೆಗೆ ಬಿದ್ದ ಚಿರತೆ
ತಾಲ್ಲೂಕಿನ ಸೂರಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ್ದ ಬಲೆಗೆ 3 ರಿಂದ 4 ವರ್ಷದ ಗಂಡು ಚಿರತೆ ಬಿದ್ದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಗ್ರಾಮದ ಮಹೇಶ್ ಎಂಬುವವರ ಜಮೀನಿನಲ್ಲಿ ಚಿರತೆ ಸೆರೆಗಾಗಿ ನಂಜನಗೂಡು ಅರಣ್ಯ ಇಲಾಖೆ ಅಧಿಕಾರಿಗಳು ಬಲೆ ಇಟ್ಟಿದ್ದರು. ಪ್ರತಿದಿನ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಹಿಡಿಯಲು ಕಾರ್ಯಾಚರಣೆ ಮಾಡುತ್ತಿದ್ದರು. ಬುಧವಾರ ಚಿರತೆ ಬಲಗೆ ಸಿಲುಕಿಕೊಂಡಿದೆ. ಗ್ರಾಮಸ್ಥರ ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಸುರಕ್ಷಿತವಾಗಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.