ರಾಜ್ಯದ ವಿವಿಧ ಜಿಲ್ಲೆಗಳ ವ್ಯಾಪ್ತಿಯಲ್ಲಿ ಹಂಚಿಕೆಯಾಗದ ಮತ್ತು ಸ್ಥಗಿತಗೊಂಡಿರುವ 569 ಮದ್ಯದಂಗಡಿ ಸನ್ನದುಗಳ ಹರಾಜು ಪ್ರಕ್ರಿಯೆಗೆ ಚಾಲನೆ ದೊರೆತಿದ್ದು, ಈ ಸನ್ನದುಗಳನ್ನು ಪಾರದರ್ಶಕ ಇ-ಹರಾಜು ಮೂಲಕ ಹಂಚಿಕೆ ಮಾಡಲಾಗುತ್ತದೆ. ಇದೇ ಜ.13 ರಿಂದ 20 ರವರೆಗೆ ಹರಾಜು ಪ್ರಕ್ರಿಯೆ ಆನ್ಲೈನ್ನಲ್ಲಿ ನಡೆಯುವುದರಿಂದ ಕುಳಿತಲ್ಲೇ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶವಿದೆ ಎಂದು ಹೊಸಪೇಟೆ ವಿಭಾಗದ ಅಬಕಾರಿ ಜಂಟಿ ಆಯುಕ್ತ ಬಿ.ಮಾದೇಶ್ ಹೇಳಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಅಬಕಾರಿ ಇಲಾಖೆ ವತಿಯಿಂದ ಅಬಕಾರಿ ಸನ್ನದುಗಳ ಇ-ಹರಾಜು ಪ್ರಕ್ರಿಯೆ ಕುರಿತು ಸಾರ್ವಜನಿಕರಿಗೆ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.