ನೀರಮಾನ್ವಿ ಸರ್ಕಾರಿ ಶಾಲೆಯಲ್ಲಿ ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಗ್ರಾಂ ಪಂ ಸದಸ್ಯ ಅಳ್ಳಮ್ಮ ಕೃಷ್ಣಮೂರ್ತಿ ಚಾಲನೆ ನೀಡಿದರು. ಮಾನ್ವಿ ಸಮೀಪದ ನೀರಮಾನ್ವಿ ಸರ್ಕಾರಿ ಶಾಲೆಯಲ್ಲಿ ನಡೆದ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಭಾನುವಾರ ಗ್ರಾಮ ಪಂಚಾಯತಿ ಸದಸ್ಯರಾದ ಅಳ್ಳಮ್ಮ ಕೃಷ್ಣಮೂರ್ತಿ ಅವರು ಮಗುವಿಗೆ ಎರಡು ಹನಿ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪ್ರತಿಬಾರಿ ಎರಡು ಹನಿ ಪೋಲಿಯೋ ಹನಿ ಹಾಕಿಸುವುದು ಅತ್ಯಂತ ಅವಶ್ಯಕವಾಗಿದೆ ಎಂದು ಹೇಳಿದರು