ಕೆಪಿಎಂಇ ಕಾಯ್ದೆಯಡಿ ಖಾಸಗಿ ಆಸ್ಪತ್ರೆಗಳ ನೋಂದಣಿಗಾಗಿ ಹಾಗೂ ನೋಂದಣಿ ನವೀಕರಣಕ್ಕಾಗಿ ಯಾರಿಗೂ ವಿನಂತಿಸುವ ಅಗತ್ಯವಿಲ್ಲ ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಮಧ್ಯಾಹ್ನ 3 ಗಂಟೆಗೆ ನಡೆದ ಕೆಪಿಎಂಇ ಕಾಯ್ದೆಯಡಿ ನೋಂದಾಯಿತ ಖಾಸಗಿ ಆಸ್ಪತ್ರೆಗಳ ಸಭೆ ಜರುಗಿಸಿ ಮಾತನಾಡಿದ ಅವರು, ಆನ್ಲೈನ್ದಲ್ಲಿ ಅರ್ಜಿ ಸಲ್ಲಿಸಿ. ಪರಿಶೀಲಿಸಿ, ಕೆಪಿಎಂಇ ನಿಯಮಾನುಸಾರ ಇದ್ದಲ್ಲಿ 90 ದಿನಗಳ