ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭಾರತ ರತ್ನ ಹಾಗೂ ರಾಷ್ಟ್ರ ನಾಯಕ ಡಾ.ಬಿ.ಆರ್.ಅಂಬೇಡ್ಕರ್ ಅವರ 69 ನೇ ಪರಿನಿಬ್ಬಾಣ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಇದಕ್ಕೂ ಮೊದಲು ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಶಾದಕರಾದ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಶಿಲ್ಪಾನಾಗ್, ಜಿಲ್ಲಾ ಪಂಚಾಯತ ಸಿಇಒ ಮೋನಾ ರೋತ್, ಹೆಚ್ಚವರಿ ಜಿಲ್ಲಾಧಿಕಾರಿ ಜವರೇಗೌಡ ಸೇರಿದಂತೆ ಇತರರು ಮಾಲಾರ್ಪಣೆ ಮಾಡಿದರು.