ಮಳವಳ್ಳಿ: ದಡಮಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶದಿಂದ ಸ್ಥಳದಲ್ಲೇ ಹಸು ಸಾವು, ಪ್ರಕರಣ ದಾಖಲು
ವಿದ್ಯುತ್ ಕಂಬಕ್ಕೆ ಕಟ್ಟಿದ್ದ ಹಸುವಿಗೆ ವಿದ್ಯುತ್ ಸ್ಪರ್ಶದಿಂದ ಸ್ಥಳದಲ್ಲೇ ಮೃತಪಟ್ಟ ಘಟನೆ ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ದಡಮಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಪುಟ್ಟಸ್ವಾಮಿ ಅವರು ಹೈನುಗಾರಿಕೆ ಮಾಡಿಕೊಂಡು ಜೀವನ ನಡೆಸಿತ್ತಿದ್ದರು. ಎಂದಿನಂತೆ ಮನೆಯ ಮುಂದಿರುವ ವಿದ್ಯುತ್ ಕಂಬಕ್ಕೆ ತಮ್ಮ ಹಸುವನ್ನು ಕಟ್ಟಿದ್ದರು. ಮಳೆಯ ಕಾರಣದಿಂದಾಗಿ ವಿದ್ಯುತ್ ಸ್ಪಶರ್ಿಸಿ ಮೃತಪಟ್ಟಿದೆ. ಘಟನಾ ಸ್ಥಳಕ್ಕೆ ಸೆಸ್ಕ್ ಜೂನಿಯರ್ ಇಂಜಿನಿಯರ್ ಮಧುಸೂದನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಲಾಖೆ ವತಿಯಿಂದ ಸೂಕ್ತ ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.