ಸಿರವಾರ ತಾಲೂಕಿನ ಬಲ್ಲಟಗಿ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ 11 ಗಂಟೆಗೆ ಶಾಲಾ ಮೇಲುಸ್ತುವಾರಿ ಸಮಿತಿಯನ್ನು ರಚಿಸಲಾಯಿತು. ನೂತನ ಎಸ್ ಡಿ ಎಂ ಸಿ ಅಧ್ಯಕ್ಷರಾಗಿ ರಮೇಶ ನಾಯಕ ಮಾನ್ವಿ,ಉಪಾಧ್ಯಕ್ಷರಾಗಿ ಪಾರ್ವತಿ ಅವರು ಆಯ್ಕೆಯಾದರು. ನೂತನ ಅಧ್ಯಕ್ಷ ರಮೇಶ ನಾಯಕ ಮಾತನಾಡಿ, ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಹಾಗೂ ಸರಕಾರಿ ಸೌಲಭ್ಯಗಳು ದೊರೆಯುವಂತೆ ಕಾರ್ಯನಿರ್ವಹಿಸುತ್ತೇನೆ ಎಂದು ಹೇಳಿದರು.