ಹುಬ್ಬಳ್ಳಿ : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ವಿವಿಧ ಕಟ್ಟಡಗಳ ಕಾಮಗಾರಿಗಳ ಶಂಕು ಸ್ಥಾಪನೆ ಕಾರ್ಯಕ್ರಮವನ್ನು ಡಿಸೆಂಬರ್ 17 ರಂದು ಬೆಳಿಗ್ಗೆ 9 ಗಂಟೆಗೆ ನವನಗರದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕಾನೂನು ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರ ಘನ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರುಗಲಿದೆ.