ಕೊಳ್ಳೇಗಾಲ: ಹೊಸಮಾಲಂಗಿಯಲ್ಲಿ ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಅಪಘಾತ – ಇಬ್ಬರಿಗೆ ಪೆಟ್ಟು
ಕೊಳ್ಳೇಗಾಲ ತಾಲೂಕಿನ ಹೊಸಮಾಲಂಗಿ ಗ್ರಾಮದ ಬಳಿ ಕಬ್ಬು ತುಂಬಿದ ಟ್ರ್ಯಾಕ್ಟರ್ ಮತ್ತು ಟಿವಿಎಸ್ ಮೋಟರ್ ಸೈಕಲ್ ನಡುವೆ ಸಂಭವಿಸಿದ ಪರಿಣಾಮ ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳಿಗೆ ಗಾಯಗೊಂಡಿರುವ ಘಟನೆ ಶನುವಾರ ಮದ್ಯಾಹ್ನ ನಡೆದಿದೆ. ಹೊಸಮಾಲಂಗಿಯಿಂದ ತೆರಳುತ್ತಿದ್ದ ಟ್ರ್ಯಾಕ್ಟರ್ ಮತ್ತು ಮೋಟಾರ್ ಸೈಕಲ್ ಮುಖಾಮುಖಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದ್ದು, ಮೋಟಾರ್ ಸೈಕಲ್‌ನಲ್ಲಿ ಪ್ರಯಾಣಿಸುತ್ತಿದ್ದ ಹೂಸಮಾಲಂಗಿ ಗ್ರಾಮದ ಸಿದ್ದಪ್ಪ ಮತ್ತು ಮಹೇಶ ಎಂಬುವರು ಗಾಯಗೊಂಡಿದ್ದಾರೆ. ಘಟನೆ ಬಳಿಕ ಸ್ಥಳಕ್ಕೆ ಬಂದ ಪೊಲೀಸರು ತಕ್ಷಣವೇ ಗಾಯಾಳುಗಳನ್ನು ಕೊಳ್ಳೇಗಾಲದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ .