ನಿಗದಿತ ಸಮಯದೊಳಗೆ ನೀಲಿ ಮೆಟ್ರೋ ಮಾರ್ಗ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಲಾಗಿದ್ದು, ಕೆ.ಆರ್ ಪುರದಿಂದ ಸಿಲ್ಕ್ ಬೋರ್ಡ್ ವರೆಗೆ ಮಾರ್ಗವನ್ನು 2026 ಡಿಸೆಂಬರ್ ಗೆ ಮುಗಿಸಲು ನಿರ್ಧರಿಸಿದ್ದೇವೆ. ಉಳಿದಂತೆ ಕೆ.ಆರ್ ಪುರದಿಂದ ಹೆಬ್ಬಾಳದವರೆಗಿನ ಮಾರ್ಗವನ್ನು 2027 ಡಿಸೆಂಬರ್ ವೇಳೆಗೆ ಹಾಗೂ ಹೆಬ್ಬಾಳದಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 2027 ಜೂನ್ ಗೆ ಪೂರ್ಣಗೊಳಿಸುತ್ತೇವೆ ಎಂದು ಗುತ್ತಿಗೆದಾರರು ತಿಳಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಹಿತಿ ನೀಡಿದರು. ಕೊಡಿಗೆಹಳ್ಳಿಯಲ್ಲಿ ನಡೆಯುತ್ತಿರುವ ಮೆಟ್ರೋ ಕಾಮಗಾರಿಯನ್ನ ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಪರಿಶೀಲಿಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.