ದಾಂಡೇಲಿ: ಶ್ರೀ ವೀರಭದ್ರೇಶ್ವರ ಸಭಾಭವನದಲ್ಲಿ ಶ್ರೀ.ಕ್ಷೇತ್ರ ಧ.ಗ್ರಾ.ಯೋಜನೆಯಿಂದ ಮಹಿಳಾ ವಿಚಾರಗೋಷ್ಠಿ
ದಾಂಡೇಲಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ನಗರದ ಶ್ರೀ ವೀರಭದ್ರೇಶ್ವರ ಸಭಾಭವನದಲ್ಲಿ ಭಾನುವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ನ್ಯಾಯವಾದಿ ಅನಿತಾ ಸೋಮಕುಮಾರ್ ಅವರು ಉದ್ಘಾಟಿಸಿ ಮಾತನಾಡುತ್ತಾ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸ್ವಸಹಾಯ ಸಂಘಗಳ ಮೂಲಕ ಹಾಗೂ ಜ್ಞಾನವಿಕಾಸ ಮಹಿಳಾ ಕೇಂದ್ರಗಳ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಅತ್ಯಂತ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.