ಚಿಕ್ಕೋಡಿ: ಪಟ್ಟಣದಲ್ಲಿ ಭಾರಿ ಮಳೆ, ಜನಜೀವನ ಅಸ್ತವ್ಯಸ್ತ
ಚಿಕ್ಕೋಡಿ ಉಪವಿಭಾಗದಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಿದೆ. ಬಾರಿ ಮಳೆಯಿಂದಾಗಿ ರಸ್ತೆಗಳು ಕೆರೆಯಂತಾಗಿದೆ. ಚಿಕ್ಕೋಡಿ ಪಟ್ಟಣದಲ್ಲಿ ಇಂದು ಮಂಗಳವಾರ ಮಧ್ಯಾಹ್ನ ೧ ಗಂಟೆಯಿಂದ ೩ ಗಂಟೆಯ ತನಕ ಸತತ ಎರಡು ತಾಸು ಗಳ ಕಾಲ ಮಳೆ ಸುರಿಯುತ್ತಿದೆ. ಇದರಿಂದ ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು ಸವಾರ ಪರದಾಡುವ ಸ್ಥೀತಿ ನಿರ್ಮಾಣವಾಗಿದೆ.