ಶಿವಮೊಗ್ಗ: ನಗರದ ಶ್ರೀದತ್ತ ಆಶ್ರಮ ಹಾಗೂ ಸುತ್ತಮುತ್ತಲಿನ ಪ್ರದೇಶಕ್ಕೆ ಶಾಸಕ ಚನ್ನಬಸಪ್ಪ ಭೇಟಿ
ಶಿವಮೊಗ್ಗ ನಗರದ ವಾರ್ಡ್ ಸಂಖ್ಯೆ 34ರ ಶ್ರೀದತ್ತ ಆಶ್ರಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಶಾಸಕ ಎಸ್.ಎನ್.ಚನ್ನಬಸಪ್ಪ ಸೋಮವಾರ ಬೆಳಿಗ್ಗೆ 10:30 ಕ್ಕೆ ಭೇಟಿ ನೀಡಿ, ರಸ್ತೆ ಅಭಿವೃದ್ಧಿ ಕಾರ್ಯಗಳ ಅಗತ್ಯತೆ ಹಾಗೂ ಸ್ಥಳೀಯ ನಿವಾಸಿಗಳ ಸಮಸ್ಯೆಗಳನ್ನು ಪರಿಶೀಲಿಸಿದರು. ಈ ವೇಳೆ ಸಾರ್ವಜನಿಕರು ಸ್ಥಳೀಯ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದ್ರು. ಸಮಸ್ಯೆಗಳನ್ನು ಬಗೆಹರಿಸುವುದಾಗಿ ಶಾಸಕರು ತಿಳಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ಹಾಗೂ ಸೂಡಾ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು.