ಪರೀಕ್ಷಾ ಕೇಂದ್ರದಲ್ಲಿ ಮುಂಜಾಗ್ರತಾ ಕ್ರಮ ವಹಿಸಲು ಜಿಲ್ಲಾಧಿಕಾರಿ ಡಾ.ಎಂ. ಆರ್. ರವಿ ಸೂಚನೆ ಡಿಸೆಂಬರ್ 7ರಂದು ನೆಡೆಯುವ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತೆ ಪರೀಕ್ಷೆ ಹಿನ್ನೆಲೆ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಗೊಂದಲಗಳಿಗೂ ಅವಕಾಶ ಇರಬಾರದು. ಆದ್ದರಿಂದ ಅಧಿಕಾರಿಗಳು ಅಡಚಣೆ ಇಲ್ಲದೆ ಪಾರದರ್ಶಕತೆಯಿಂದ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಆರ್ ರವಿ ಅವರು ತಿಳಿಸಿದರು. ಮಂಗಳವಾರ ಮಧ್ಯಾಹ್ನ 2 ಗಂಟೆಯಲ್ಲಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತೆ ಪರೀಕ್ಷೆ - 2025 ಕುರಿತು ಪೂರ್ವ ಭಾವಿ ಸಭೆಯಲ್ಲಿ ಅಧಿಕಾರಿಗಳನ್ನು ಕುರಿತು ಮಾತನಾಡುತ್ತಿದ್ದರು. ಪರೀಕ್ಷೆಯು ಜಿಲ್ಲೆಯ 22ಪರೀಕ್ಷಾ ಕೇಂದ್ರಗಳಲ್ಲಿ ಎರಡು ಅ