ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ವಿ.ಆರ್.ಡಬ್ಲ್ಯೂ, ಎಂ.ಆರ್.ಡಬ್ಲ್ಯೂ ಹಾಗೂ ಯು.ಆರ್.ಡಬ್ಲ್ಯೂ ಕಾರ್ಯಕರ್ತರ ಪಾತ್ರ ಪ್ರಮುಖವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ್ ಅವರು ತಿಳಿಸಿದರು.ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಜಿಲ್ಲೆಯ ವಿ.ಆರ್.ಡಬ್ಲ್ಯೂ, ಎಂ.ಆರ್.ಡಬ್ಲ್ಯೂ ಹಾಗೂ ಯು.ಆರ್.ಡಬ್ಲ್ಯೂ ಕಾರ್ಯಗಾರದಲ್ಲಿ ಮಾತನಾಡಿದರು