ಬಗರ ಹುಕಂ ಪತ್ರ ನೀಡುವಂತೆ ಒತ್ತಾಯಿಸಿ ಅಖಿಲ ಭಾರತ ರೈತ ಕೃಷಿಕ ಕಾರ್ಮಿಕ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಏಳು ದಶಕಗಳಿಂದ ಸರಕಾರಿ ಭೂಮಿಯಲ್ಲಿ ಉಳುಮೆ ಮಾಡುತ್ತಿರುವ ಲಕ್ಷಾಂತರ ಬಗರ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸುವಂತೆ ಶುಕ್ರವಾರ ಜಿಲ್ಲಾಧಿಕಾರಿ ಮೂಲಕ ಕಂದಾಯ ಸಚಿವರಿಗೆ ಮನವಿ ಸಲ್ಲಿಸಿದರು. ಅಖಿಲ ಭಾರತ ರೈತ ಕೃಷಿಕ ಕಾರ್ಮಿಕ ಸಂಘಟನೆ ಪ್ರತಿಭಟನೆ ನಡೆಸಿ, ಬೆಳಗಾವಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಳು ದಶಕಗಳಿಂದ ಸರಕಾರಿ ಭೂಮಿಯಲ್ಲಿ ಉಳುಮೆ ಮಾಡುತ್ತಿರುವ ಲಕ್ಷಾಂತರ ಬಗರ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸುವಂತೆ ಆಗ್ರಹಿಸಿದರು