ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ ಇದುವರೆಗೂ 1 ಲಕ್ಷದ 10 ಸಾವಿರ ಕೋಟಿ ರೂ. ಹಣವನ್ನು ರಾಜ್ಯ ಸರ್ಕಾರ ವ್ಯಯಿಸಿದೆ. ಹೊಳಲ್ಕೆರೆ ತಾಲೂಕಿಗೆ 293 ಕೋಟಿ ರೂ.ಗೂ ಅಧಿಕ ಹಣವನ್ನು ವೆಚ್ಚ ಮಾಡುವ ಮೂಲಕ ಜನತೆಗೆ ಆರ್ಥಿಕ ಮತ್ತು ಸಾಮಾಜಿಕ ಭದ್ರತೆ ಕಲ್ಪಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಕೈಗೊಂಡಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ದಿನೇಶ್ ಗೂಳಿಗೌಡ ಅವರು ಹೇಳಿದರು.ಹೊಳಲ್ಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ಯಾರಂಟಿ ಯೋಜನೆಳಿಗೆ ಹಣ ನೀಡುವುದರ ಜೊತೆಗೆ ಅಭಿವೃದ್ಧಿ ಕಾಮಗಾರಿಗಳಿಗಾಗಿ ಹಣ ನೀಡಿದ್ದಾರೆ ಎಂದರು