ಹೆಗ್ಗಡದೇವನಕೋಟೆ: ಮತದಾರ ನೀಡುವ ತೀರ್ಪು ದೇಶದ ಭವಿಷ್ಯವನ್ನು ತೀರ್ಮಾನಿಸುತ್ತದೆ: ಪಟ್ಟಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಮತದಾರ ನೀಡುವ ತೀರ್ಪು ದೇಶದ ಭವಿಷ್ಯವನ್ನು ತೀರ್ಮಾನಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು, ಸಂತೆಮಾಳ ಮೈದಾನದಲ್ಲಿ ಶುಕ್ರವಾರ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿದ್ದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಬೃಹತ್ ಸಭೆಯಲ್ಲಿ ಭಾಗಿ ಆಗಿ ಮಾತನಾಡಿದರು. ರಾಜ್ಯ ಮತ್ತು ರಾಷ್ಟ್ರದ ಹಿತ ಕಾಪಾಡಲು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವ ಹೊಣೆ ನಿಮ್ಮ ಮೇಲಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಸೇರಿ ಒಟ್ಟು 27 ಅಭ್ಯರ್ಥಿಗಳನ್ನು ಗೆಲ್ಲಿಸಿ ಕಳುಹಿಸಲಾಗಿತ್ತು. ರಾಜ್ಯಕ್ಕೆ ಅನ್ಯಾಯ ಆದಾಗ ಇವರು ಯಾರು ಬಾಯಿ ತೆರೆದು ಮಾತನಾಡಲಿಲ್ಲ ಎಂದು ತಿಳಿಸಿದರು.