ಬಳ್ಳಾರಿ: 23ನೇ ಬಳ್ಳಾರಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಿ.ಜಿ. ಹಂಪಣ್ಣ ಆಯ್ಕೆ
ಬಳ್ಳಾರಿಯಲ್ಲಿ ನಡೆಯಲಿರುವ 23ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಿ.ಜಿ. ಹಂಪಣ್ಣ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಡಾ. ನಿಷ್ಠಿ ರುದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.