ಹನೂರು: ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ ಆರಂಭ:
5ಲಕ್ಷಕ್ಕೂ ಅಧಿಕ ಲಡ್ಡು ತಯಾರಿ, ಭಕ್ತ ಸಾಗರ
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶ್ರೀ ಕ್ಷೇತ್ರ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವ ಭಕ್ತಿಭಾವದಿಂದ ಚಾಲನೆಗೊಂಡಿದ್ದು, ಐದು ದಿನಗಳ ಕಾಲ ವಿಜೃಂಭಣೆಯಿಂದ ನಡೆಯಲಿದೆ. ರಾಜ್ಯದ ವಿವಿಧ ಭಾಗಗಳು ಹಾಗೂ ತಮಿಳುನಾಡು ರಾಜ್ಯದ ಎಲ್ಲೆಡೆಯಿಂದ ಸಾವಿರಾರು ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ, ಕಾಲ್ನಡಿಗೆ ಯಾತ್ರಿಕರು ದೊಡ್ಡ ಸಂಖ್ಯೆಯಲ್ಲಿ ಸಾಗರೋಪಾಧಿಯಾಗಿ ಬೆಟ್ಟದತ್ತ ಸಾಗುತ್ತಿದ್ದಾರೆ. ಇನ್ನೊಂದೆಡೆ ದ್ವಿಚಕ್ರ ವಾಹನ, ಕಾರು ಮತ್ತು ಬಸ್‌ಗಳಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ತಮಿಳುನಾಡು ಸೇರಿದಂತೆ ವಿವಿಧ ಕಡೆಗಳಿಂದಲೂ ಆಗಮಿಸುತ್ತಿದ್ದಾರೆ. ಭಕ್ತರ ಆವರ್ತನವನ್ನು ದೃಷ್ಠಿಯಲ್ಲಿ ಇಟ್ಟುಕೊಂಡು, ಪ್ರಾಧಿಕಾರದಿಂದ ಸಿದ್ದತೆ ಮಾಡಲಾಗಿದೆ