ಕೂಡ್ಲಿಗಿ: ಗೌರಿ ಗಣೇಶ ಹಬ್ಬದ ಹಿನ್ನೆಲೆ ಗುಡೆಕೋಟೆ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೆಕೋಟೆ ಪೊಲೀಸ್ ಠಾಣೆಯಲ್ಲಿ ಗೌರಿ ಗಣೇಶ ಹಬ್ಬದ ಹಿನ್ನೆಲೆ ಶಾಂತಿ ಸಭೆ ನಡೆಯಿತು. ಡಿವೈಎಸ್ಪಿ ಮತ್ತು ಸಿಪಿಐ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಬ್ಬವನ್ನು ಸರ್ಕಾರದ ಮಾರ್ಗಸೂಚಿಯಂತೆ ಶಾಂತಿಯುತವಾಗಿ ಆಚರಿಸಲು ಸೂಚಿಸಲಾಯಿತು.