ಬೆಂಗಳೂರು ಉತ್ತರ: ಪ್ರೇಯಸಿಯ ಹೊಸ ಲವ್ವರ್‌ಗೆ ಚಾಕು ಇರಿದ ಮಾಜಿ ಬಾಯ್‌ಫ್ರೆಂಡ್,
ವೈಯಾಲಿಕಾವಲ್ ಬಳಿ ಘಟನೆ
ಯುವತಿಯನ್ನು ಪ್ರೀತಿಸುವ ವಿಚಾರಕ್ಕೆ ಓರ್ವ ಯುವಕನಿಗೆ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯ ಜಟಕಾ ಸ್ಟ್ಯಾಂಡ್ ಬಳಿ ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಯತೀಶ್ ಚಾಕು ಇರಿದ ಆರೋಪಿ. ಚಂದನ್ ಚಾಕು ಇರಿತದಿಂದ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಚಂದನ್ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದು, ಯುವತಿ ಕೂಡ ಚಂದನ್ನನ್ನು ಪ್ರೀತಿಸುತ್ತಿದ್ದಾರೆ. ಇದೇ ಯುವತಿ ಚಂದನ್ಗಿಂತ ಮೊದಲು ಆರೋಪಿ ಯತೀಶ್ನನ್ನು ಪ್ರೀತಿಸುತ್ತಿದ್ದಳು. ಯತೀಶ್ನೊಂದಿಗೆ ಬ್ರೇಕ್ಅಪ್ ಮಾಡಿಕೊಂಡು, ಚಂದನ್ನನ್ನು ಪ್ರೀತಿಸುತ್ತಿದ್ದಾಳೆ. ಸದ್ಯ ಚಾಕು ಹಿರಿತಕ್ಕೊಳಗಾದ ಗಾಯಾಳು ಚಂದನ್ ಸ್ಥಿತಿ ಗಂಭೀರವಾಗಿದೆ.