ರಾಯಚೂರು ತಾಲ್ಲೂಕಿನ ಶಕ್ತಿನಗರದಲ್ಲಿ ಇರುವ ರಾಯಚೂರು ವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ ಮೂರು ಘಟಕಗಳ ಸ್ಥಗಿತವಾಗಿದ್ದು ವಿದ್ಯುತ್ ಉತ್ಪಾದನೆ ಕುಂಟಿತಗೊಂಡಿವೆ. 8 ಘಟಕಗಳಲ್ಲಿ ಪ್ರಸ್ತುತ 5 ಘಟಕಗಳು ಕಾರ್ಯ ನಿರ್ವಹಿಸುತ್ತಿದ್ದು, 1720 ಮೆಘಾವ್ಯಾಟ್ ನಲ್ಲಿ 900 ಮೆಗಾವ್ಯಾಟ್ ಉತ್ಪಾದನೆಯಾಗುತ್ತಿದ್ದು, ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ತಗ್ಗಿದ ಹಿನ್ನಲೆ ಮೂರು ಘಟಕಗಳಿಗೆ ವಿಶ್ರಾಂತಿ ನೀಡಲಾಗಿದೆ.