ತಾಲೂಕಿನ ಸುತ್ತಮುತ್ತಲಿನ ಗ್ರಾಮದ ಕೃಷಿ ಕೂಲಿ ಕಾರ್ಮಿಕರನ್ನು ಹಾಗೂ ಶಾಲಾ ವಿದ್ಯಾರ್ಥಿಗಳನ್ನು ಗೂಡ್ಸ್ ವಾಹನಗಳಲ್ಲಿ ಹತ್ತಿ ಬಿಡಿಸುವುದಕ್ಕೆ ಕರೆದುಕೊಂಡು ಹೋಗುತ್ತಿದ್ದು, ಇದರಿಂದ ಅನಾಹುತಗಳು ಸಂಭವಿಸಿವೆ, ಕೂಡಲೇ ಜಿಲ್ಲಾ ಪೋಲಿಸ್ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪೋಲಿಸ್ ವರಿಷ್ಠಾಧಿಕಾರಿ ಕಚೇರಿ ಸ್ಥಾನಿಕ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು. .