ಬೆಂಗಳೂರು ಉತ್ತರ: ನಟಿ ರಮ್ಯಾಗೆ ಅಶ್ಲೀಲ ಮೆಸೆಜ್, ಮತ್ತೊಬ್ಬ ಆರೋಪಿಯನ್ನ ವಶಕ್ಕೆ ಪಡೆದು ನಗರಕ್ಕೆ ಕರೆತಂದ ಖಾಕಿ
ನಟಿ ರಮ್ಯಾಗೆ ಅಶ್ಲೀಲ ಸಂದೇಶ, ಬೆದರಿಕೆ ಕೇಸ್ ಪ್ರಕರಣಕ್ಕೆ ಸಂಬಂಧಿಸಿ ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಮತ್ತೊಬ್ಬ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಮೂಲದ ಸಂತೋಷ್ ಎಂಬ ದರ್ಶನ್ ಅಭಿಮಾನಿಯ ಬಂಧನ ಮಾಡಲಾಗಿದ್ದು, ಆರೋಪಿ ವಿಜಯಪುರದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ. ಸೋಷಿಯಲ್ ಮೀಡಿಯಾ ಮೂಲಕ ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಆರೋಪಿ, ನಮ್ ಬಾಸ್ ತಂಟೆಗೆ ಬರಬೇಡ ಎಂದು ಕೆಟ್ಟ ಪದ ಬಳಸಿದ್ದ, ಸದ್ಯ ಐಪಿ ಅಡ್ರೆಸ್ ಮೂಲಕ ಆರೋಪಿ ಬಂಧಿಸಿದ ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಸಂಜೆ 4 ಗಂಟೆ ಸುಮಾರಿಗೆ ಪೊಲೀಸ್ ಆಯುಕ್ತರ ಕಚೇರಿಗೆ ಆರೋಪಿಯನ್ನ ವಶಕ್ಕೆ ಪಡೆದು ಕರೆ ತಂದಿದ್ದಾರೆ.