ಚಿತ್ರದುರ್ಗ: ರಾಜ್ಯದ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನ ಪರಿಹರಿಸಲು ಆಗ್ರಹಿಸಿ ನಗರದಲ್ಲಿ ಪ್ರತಿಭಟನೆ
ರಾಜ್ಯದ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನ ಪರಿಹರಿಸಲು ಆಗ್ರಹಿಸಿ ಚಿತ್ರದುರ್ಗದಲ್ಲಿಂದು ಪ್ರತಿಭಟನೆ ನಡೆಸಲಾಯಿತು.ಏಐಡಿಎಸ್ಒ ಸಂಘಟನೆ ವತಿಯಿಂದ ಬುದವಾರ ಮಧ್ಯಾಹ್ನ 12 ಗಂಟೆಗೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಇಲ್ಲಿಯವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ