ಕೃಷ್ಣರಾಜಪೇಟೆ: ಹರಳಹಳ್ಳಿ ಗ್ರಾಮಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಕಾವ್ಯಚಂದ್ರು ಆಯ್ಕೆ
ಕೆ. ಆರ್. ಪೇಟೆ ತಾಲ್ಲೂಕಿನ ಹರಳಹಳ್ಳಿ ಗ್ರಾಮಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಕಾವ್ಯಚಂದ್ರು ಅವರು ಅವಿರೋಧ ಆಯ್ಕೆಯಾಗಿದ್ದಾರೆ. ಹಿಂದಿನ ಅಧ್ಯಕ್ಷ ಬೇಲದಕೆರೆ ಅಶೋಕ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಕಾವ್ಯಚಂದ್ರು ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ, ಚುನಾವಣಾಧಿಕಾರಿಗಳು ಕಾವ್ಯರಾಮಚಂದ್ರು ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿರುವುದಾಗಿ ಘೋಷಿಸಿದರು. ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರನ್ನು ಗ್ರಾ.ಪಂ ಸದಸ್ಯರು, ಮುಖಂಡರು ಅಭಿನಂದಿಸಿ ಗೌರವಿಸಿದರು.