ಶಿವಮೊಗ್ಗ: ಸೊಪ್ಪುಗುಡ್ಡೆಯ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ಆರಗ ಜ್ಞಾನೇಂದ್ರ
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಸೊಪ್ಪುಗುಡ್ಡೆಯ ನಿವಾಸದಲ್ಲಿ ಜನತಾದರ್ಶನ ನಡೆಸಿ ಸಾರ್ವಜನಿಕರ ಅಹವಾಲನ್ನು ಭಾನುವಾರ ಶಾಸಕ ಆರಗ ಜ್ಞಾನೇಂದ್ರ ಅವರು ಸ್ವೀಕರಿಸಿದ್ದಾರೆ ಸೊಪ್ಪುಗುಡ್ಡೆಯ ಶಾಸಕರ ಗೃಹ ಕಚೇರಿಯಲ್ಲಿ ಜನತಾದರ್ಶನ ನಡೆಸಿದ ಶಾಸಕರಿಗೆ ಸಾರ್ವಜನಿಕರು ತಮ್ಮ ಗ್ರಾಮದ ಅಭಿವೃದ್ಧಿ ಕಾಮಗಾರಿಗಳ ಕುರಿತಾಗಿ ಹಾಗೂ ಸಮಸ್ಯೆಗಳ ಕುರಿತಾಗಿ ಆಹ್ವಾನನ್ನ ನೀಡಿದರು. ಈ ಸಂಬಂಧ ಶಾಸಕರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ದೂರವಾಣಿ ಮೂಲಕ ಕರೆ ಮಾಡಿ ಸಮಸ್ಯೆಗಳನ್ನ ಬೇಗ ಬಗೆಹರಿಸುವಂತೆ ಸೂಚನೆ ನೀಡಿದರು.