ದಾಂಡೇಲಿ : ನಗರದ ರೋಟರಿ ಕ್ಲಬ್ ಮತ್ತು ಇನ್ನರ್ ವಿಲ್ ಕ್ಲಬ್ ಇವುಗಳ ಸಂಯುಕ್ತ ಆಶ್ರಯದಡಿ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ತಂತ್ರಜ್ಞಾನದ ಕುರಿತಂತೆ ಜಾಗೃತಿಯನ್ನು ಮೂಡಿಸುವ ನಿಟ್ಟಿನಲ್ಲಿ ವಿಗ್ಯಾನ್ ರಥಂ ಪ್ರದರ್ಶನ ಕಾರ್ಯಕ್ರಮವನ್ನು ಶನಿವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಜನತಾ ವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಯ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ರೋಟರಿ ಕ್ಲಬ್ ಅಧ್ಯಕ್ಷ ಅಶುತೋಷ್ ಕುಮಾರ್ ರಾಯ್ ಅವರು ವೈಜ್ಞಾನಿಕ ಜಾಗೃತಿ ಮೂಡಿಸುವುದು, ಆವಿಷ್ಕಾರಗಳನ್ನು ಉತ್ತೇಜಿಸುವುದು ಮತ್ತು ಶೈಕ್ಷಣಿಕ ಚಟುವಟಿಕೆಗಳನ್ನು ಸ್ಥಳೀಯರಿಗೆ ತಲುಪಿಸುವುದೇ ವಿಗ್ಯಾನ್ ರಥಂ ಇದರ ಪ್ರಮುಖ ಉದ್ದೇಶವಾಗಿದೆ ಎಂದರು.