ಚಿಕ್ಕಮಗಳೂರು: ಜುಲೈ 26ರಂದು ನಗರದಲ್ಲಿ ಬಿಎಸ್ಪಿ ಪ್ರತಿಭಟನೆ: ನಗರದಲ್ಲಿ ಬಿಎಸ್ಪಿ ಜಿಲ್ಲಾಧ್ಯಕ್ಷ ಕೆ.ಟಿ ರಾಧಾಕೃಷ್ಣ ಮಾಹಿತಿ
ಎಸ್ಸಿಎಸ್ಟಿ ಸಮುದಾಯಕ್ಕೆ ಮೀಸಲಿಟ್ಟಿದ್ದ ಹಣ ಹಾಗೂ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ರಾಜ್ಯ ಸರಕಾರದ ವಿರುದ್ಧ ಜು.26 ರಂದು ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಎಸ್ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಸ್ಸಿ ಎಸ್ಟಿ ಸಮುದಾಯದ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ 32 ಸಾವಿರ ಕೋಟಿ ರೂ.ಗಳನ್ನು ರಾಜ್ಯ ಸರಕಾರ 5 ಗ್ಯಾರಂಟಿ ಯೋಜನೆಗಳಿಗೆ ಬಳಸಿರುವುದಾಗಿ ಹೇಳಿದೆ. ಇದಕ್ಕೆ ರಾಜ್ಯಾದ್ಯಂತ ದಲಿತ ಸಂಘಟನೆಗಳಿಂದ ವಿರೋಧ ವ್ಯಕ್ತವಾದರೂ ಸಹ ಸರಕಾರ ಇತ್ತ ಕಿವಿಗೊಡದೆ ನಿರ್ಲಕ್ಷ್ಯ ತಾಳಿದೆ ಎಂದು ಆರೋಪಿಸಿದರು.