ಚಿನ್ನಸ್ವಾಮಿ ಸ್ಟೇಡಿಯಂ ಕುರಿತಂತೆ ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಕೇಂದ್ರ ಜಿಬಿಎ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯ ಆಯುಕ್ತರಾದ ಮಹೇಶಗವರ್ ರಾವ್ ಅವರು, ಅದರ ಬಗ್ಗೆ ಅಂತಿಮ ನಿರ್ಧಾರ ಪೊಲೀಸ್ ಆಯುಕ್ತರದಾಗಿದೆ. ನಾವು ಕೂಡ ಸರ್ಕಾರಕ್ಕೆ ರಿಪೋರ್ಟ್ ಸಲ್ಲಿಕೆ ಮಾಡುತ್ತೇವೆ ನಂತರ ಸರ್ಕಾರ ತೀರ್ಮಾನ ಮಾಡುತ್ತಾರೆ. ಅದರ ಬಗ್ಗೆ ಹೆಚ್ಚಿನ ಮಾಹಿತಿ ಹೇಳಲು ಈಗ ಆಗೋದಿಲ್ಲ, ರಿಪೋರ್ಟ್ ಸಲ್ಲಿಕೆ ಆದ ಮೇಲೆ ಸರ್ಕಾರ ನಿರ್ಧಾರ ಮಾಡುತ್ತೆ. ಘಟನೆ ಬಗ್ಗೆ ಕುಲಂಕುಶವಾಗಿ ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲು ತಿಳಿಸಿದ್ದರು ಅದರ ಪ್ರಕಾರ ವರದಿ ಸಲ್ಲಿಕೆ ಮಾಡಿದ್ದೇವೆ ಎಂದರು.