ಶಿವಮೊಗ್ಗ: ನೆಲವಾಗಿಲು ಗ್ರಾಮದಲ್ಲಿ ಸಾಲಭಾದೆಗೆ ಆತ್ಮಹತ್ಯೆ ಮಾಡಿಕೊಂಡ ರೈತನ ನಿವಾಸಕ್ಕೆ ಭೇಟಿ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ಶಾಸಕ ಬಿ ವೈ ವಿಜಯೇಂದ್ರ
ಶಿಕಾರಿಪುರ ತಾಲ್ಲೂಕಿನ ನೆಲವಾಗಿಲು ಗ್ರಾಮದಲ್ಲಿ ಸಾಲ ಭಾದೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ ಬಸವರಾಜಪ್ಪ ಮನೆಗೆ ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಸೋಮವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ, ಬ್ಯಾಂಕಿನಲ್ಲಿರುವ ಸಾಲದ ಬಗ್ಗೆ ವಿಚಾರಿಸಿದ ಅವರು, ಧೈರ್ಯದಿಂದ ಜೀವನ ನಡೆಸಬೇಕು. ನಿಮ್ಮ ಮಕ್ಕಳ ಶಿಕ್ಷಣ ಸೇರಿದಂತೆ ಇತರೆ ಕೆಲಸ ಕಾರ್ಯಗಳ ಬಗ್ಗೆ ನನ್ನ ಗಮನಕ್ಕೆ ತರಬೇಕು,ನನ್ನ ಕೈಲಾದ ಸಹಾಯ ಮಾಡುತ್ತೇನೆ. ರೈತ ಕುಟುಂಬಕ್ಕೆ ಶೀಘ್ರವಾಗಿ ರೈತ ಆತ್ಮಹತ್ಯೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದು ಸ್ಥಳದಲ್ಲಿದ್ದ ಕಂದಾಯ ಇಲಾಖೆ ಅಧಿಕಾರಿ ಶಿವಣ್ಣಗೆ ಸೂಚಿಸಿದರು.