ಚಿಕ್ಕಮಗಳೂರು: ನಗರದ ಎಐಟಿ ಕಾಲೇಜಿನಲ್ಲಿ ಜುಲೈ 24ರಿಂದ ಅಂತಾರಾಷ್ಟ್ರೀಯ ಸಮ್ಮೇಳನ: ನಗರದಲ್ಲಿ ಕಾಲೇಜು ಪ್ರಾಂಶುಪಾಲ ಡಾ. ಸಿ.ಟಿ ಜಯದೇವ
ನಗರದ ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಮತ್ತುಎಂಜಿನಿಯರಿಂಗ್ ವಿಭಾಗದಿಂದ ಮಾಹಿತಿ ತಂತ್ರಜ್ಞಾನದಲ್ಲಿ ಆಗುತ್ತಿರುವ ಅಭಿವೃದ್ಧಿ ಹಾಗೂ ಬೆಳವಣಿಗೆಗಳ ಬಗ್ಗೆ ಜು.24ರಿಂದ 27 ರವರೆಗೆ ಅಂತರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗಿದೆಯೆಂದು ಕಾಲೇಜಿನ ಪ್ರಾಂಶುಪಾಲ ಡಾ.ಸಿ.ಟಿ. ಜಯದೇವ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜು.25ರಂದು ಬಾಹ್ಯಾಕಾಶ ಸಂಸ್ಥೆ ಇಸ್ರೋ ಅಧ್ಯಕ್ಷ ಡಾ.ಎಸ್.ಸೋಮನಾಥ ಸಮ್ಮೇಳನ ಉದ್ಘಾಟಿಸಲಿದ್ದು, ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಮಹಾಸ್ವಾಮಿ, ಶೃಂಗೇರಿ ಶಾಖಾ ಮಠದ ಗುಣನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆಂದರು.