ರಾಯಚೂರು: ದೇಶ ಪ್ರೇಮ ಬೆಳೆಸಿಕೊಳ್ಳಿ- ರಾಯಚೂರಿನಲ್ಲಿ ಲಹರ್ ಸಿಂಗ್
ಸರ್ಧಾರ ವಲ್ಲಭಭಾಯಿ ಪಟೇಲ್ ಅವರು ಭಾರತವನ್ನು ಏಕೀಕರಣಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ದೇಶ ಪ್ರೇಮ ಮತ್ತು ಜೀವನ ಸಂದೇಶಗಳನ್ನು ದೇಶದ ಯುವಕರು ಮೈಗೂಡಿಸಿಕೊಳ್ಳಬೇಕು ಎಂದು ರಾಜ್ಯ ಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ ಹೇಳಿದರು. ಅವರಿಂದು ನಗರದ ಸರ್ಧಾರ ವಲ್ಲಭ ಭಾಯಿ ಪಟೇಲ್ ವೃತ್ತದಲ್ಲಿ ಮಹಾನಗರ ಪಾಲಿಕೆ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಜಿಲ್ಲಾ ಮಟ್ಟದ ಏಕತಾ ಯಾತ್ರೆ ಅಂಗವಾಗಿ ವಲ್ಲಭಭಾಯಿ ಪಟೇಲ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.