ಬೆಂಗಳೂರು ಉತ್ತರ: ರಾಜ್ಯದ ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆ
ರಾಜ್ಯದ ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರ ಕುರಿತು ರಾಜ್ಯದ ಸಂಸದರು, ರಾಜ್ಯಸಭೆ ಸದಸ್ಯರು ಹಾಗೂ ಸಕ್ಕರೆ ಕಾರ್ಖಾನೆಗಳ ಮುಖ್ಯಸ್ಥರೊಂದಿಗೆ ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ಸಚಿವರಾದ ಎಚ್.ಕೆ. ಪಾಟೀಲ್, ಎಂ.ಬಿ. ಪಾಟೀಲ್, ಶಿವಾನಂದ ಪಾಟೀಲ್, ಸತೀಶ್ ಜಾರಕಿಹೊಳಿ, ಆರ್.ಬಿ. ತಿಮ್ಮಾಪುರ, ಶರಣ್ ಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ, ಲಕ್ಷ್ಮೀ ಹೆಬ್ಬಾಳ್ಕರ್, ಸಂಸದ ಲೆಹರ್ ಸಿಂಗ್, ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ, ಮಾಜಿ ಸಚಿವ ಮುರುಗೇಶ್ ನಿರಾಣಿ, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಾಜನೀಶ್ ಹಾಗೂ ಅನೇಕರು ಭಾಗವಹಿಸಿದರು.