ಮೂಡಲಗಿ: ಪಟ್ಟಣದಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಪಟ್ಟಣದಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟನೆ ಗೊಳಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಗುರುವಾರ ಇಂದಿರಾ ಕ್ಯಾಂಟಿನ್ ಉದ್ಘಾಟನೆ ಗೊಳಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಈ ಸಂದರ್ಭದಲ್ಲಿ ಮಾತನಾಡಿದರು. ಅಸಂಘಟಿತ ಕಾರ್ಮಿಕರು, ಬಡ ಜನರಿಗೆ ಇಂದಿರಾ ಕ್ಯಾಂಟಿನ್ ವರದಾನವಾಗಿದ್ದು, ಕಡಿಮೆ ದರದಲ್ಲಿ ಉಪಹಾರ ಮತ್ತು ಊಟದ ಸೌಲಭ್ಯಗಳನ್ನು ಹೊಂದಿರುವ ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು