ಚಾಮರಾಜನಗರ: ನಗರದಲ್ಲಿ ಅಖಿಲ ಭಾರತ ಗೃಹ ರಕ್ಷಕದಳ ದಿನಾಚರಣೆ
ಚಾಮರಾಜನಗರ ಡಾ.ಬಿಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣ ಸಮೀಪ ಇರುವ ನೂತನ ಪೊಲೀಸ್ ಭವನದಲ್ಲಿ ಜಿಲ್ಲಾ ಗೃಹರಕ್ಷಕ ದಳದಿಂದ ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕೊಳ್ಳೇಗಾಲದ ಡಿವೈಎಸ್ಪಿ ಧರ್ಮೇಂದ್ರ ಹಾಗೂ ಡಿಎಆರ್ ಕೇಂದ್ರದ ಡಿವೈಎಸ್ಪಿ ಸೋಮಣ್ಣ ಅವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಗೃಹ ರಕ್ಷಕದಳದಲ್ಲಿ ಸುಧೀರ್ಘವಾಗಿ ಸೇವೆ ಸಲ್ಲಿಸಿದ ಸಿಬ್ಬಂದಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.