ಹೊನ್ನಾವರ : ತಾಲೂಕಿನ ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಗೇರುಸೊಪ್ಪಾದ ಶ್ರೀ ವೀರಾಂಜನೇಯ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಕಾರ್ಯಕ್ರಮವು ಸಂಭ್ರಮ, ಸಡಗರ ಹಾಗೂ ಶ್ರದ್ಧಾಭಕ್ತಿಯಿಂದ ಜರುಗಿತು. ಪೂಜ್ಯ ಮಾರುತಿ ಗುರೂಜಿಯವರ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ತಿಕ ದೀಪೋತ್ಸವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಭಾಗವಹಿಸಿ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾದರು. ಶುಕ್ರವಾರವು ಸಂಜೆ ಏಳು ಗಂಟೆಯಿಂದ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ಮುಂದುವರೆದಿದೆ.