ಗೋಕರ್ಣದ ಸರ್ವತೋಮುಖ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಶಾಸಕ ಶ್ರೀ ದಿನಕರ ಶೆಟ್ಟಿ ಅವರು ಇಂದು ಅಧಿಕಾರಿಗಳ ತಂಡದೊಂದಿಗೆ ಕ್ಷೇತ್ರ ಪರಿಶೀಲನೆಯನ್ನು ಶಾಸಕ ದಿನಕರ ಶೆಟ್ಟಿ ಅವರು ಬುಧವಾರ ಸಂಜೆ 5ರ ವೇಳೆ ನಡೆಸಿದರು. ಗೋಕರ್ಣಕ್ಕೆ ಆಗಮಿಸುವ ಪ್ರವಾಸಿಗರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಹೆಚ್ಚಿಸಲು ಮತ್ತು ಆಯ್ದ ಸ್ಥಳಗಳನ್ನು ಅಭಿವೃದ್ಧಿಪಡಿಸಲು ತಕ್ಷಣವೇ ಯೋಜನೆ ರೂಪಿಸಿ ಕ್ರಮ ಕೈಗೊಳ್ಳುವಂತೆ ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ಡೆಪ್ಯೂಟಿ ಡೈರೆಕ್ಟರ್, ಪಂಚಾಯತ್ ಅಧ್ಯಕ್ಷರು, ಸದಸ್ಯರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.