ಬೆಂಗಳೂರು ಉತ್ತರ: ಜೈಲಿನಲ್ಲಿ ಉಗ್ರರಿದ್ದಾರೆ ಆದರೆ ವಿಧಾನಸೌಧದಲ್ಲಿ ಅವರಿಗೂ ಮೀರಿದ ಉಗ್ರರಿದ್ದಾರೆ: ನಗರದಲ್ಲಿ ಕುಮಾರಸ್ವಾಮಿ
ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಅತ್ಯಾಚಾರಿಗಳು ಹಾಗೂ ಉಗ್ರರಿಗೆ ಮೊಬೈಲ್ ಫೋನ್ ಸೌಲಭ್ಯ ಸೇರಿ ರಾಜಾತಿಥ್ಯ ಕಲ್ಪಿಸಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಕಾರಾಗೃಹದಲ್ಲಷ್ಟೇ ಭಯೋತ್ಪಾದಕರಿಲ್ಲ, ಅದಕ್ಕಿಂತಲೂ ಅಪಾಯಕಾರಿ ಭಯೋತ್ಪಾದಕರು ವಿಧಾನಸೌಧದಲ್ಲಿಯೇ ಇದ್ದಾರೆ ಎಂದು ಆರೋಪಿಸಿದರು. ಸೋಮವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾತನಾಡಿದ ಅವರು, ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿಗೆ ಹಾಗೂ ಶಿಕ್ಷೆಗೆ ಗುರಿಯಾಗಿರುವ ಕುಖ್ಯಾತ ಪಾತಕಿಗಳಿಗೆ ಜೈಲು ಸಿಬ್ಬಂದಿ ರಾಜಾತಿಥ್ಯ ನೀಡುತ್ತಿರುವುದು ನಾಚಿಕೆಗೇಡು. ಭಯೋತ್ಪಾದಕರು ಕೇವಲ ಕಾರಾಗೃಹದಲ್ಲಿ ಮಾತ್ರವಷ್ಟೇ ಇಲ್ಲ,