ಗದಗ: ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೋವಿಡ್ ಪ್ರತ್ಯೇಕ ವಾರ್ಡ್ ನಿರ್ಮಾಣ
Gadag, Gadag | May 27, 2025 ರಾಜ್ಯದಲ್ಲಿ ಮತ್ತೆ ಮಹಾಮಾರಿ ಕೊರೋನಾ ಆತಂಕ ಎದುರಾಗಿದೆ. ಗದಗ ಜಿಲ್ಲೆಯಲ್ಲಿ ಸದ್ಯಕ್ಕೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಆದ್ರೆ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೋವಿಡ್ ಪ್ರತ್ಯೇಕ ವಾರ್ಡ್ ನಿರ್ಮಾಣ ಮಾಡಲಾಗಿದೆ. ಸುಮಾರು 20 ಬೆಡ್ ವಾರ್ಡ್ ನಿರ್ಮಾಣ ಮಾಡಲಾಗಿದೆ. ಪುರುಷರಿಗಾಗಿ 10 ಬೆಡ್ ವಾರ್ಡ್, ಮಹಿಳೆಯರಿಗಾಗಿ 10 ಬೆಡ್ ಉಳ್ಳ ಪ್ರತ್ಯೇಕ ವಾರ್ಡ್ ತಯಾರಿಸಲಾಗಿದೆ. ಇಲ್ಲಿ ಆಕ್ಸಿಜನ್, ವೆಂಟಿಲೇಶನ್, ಔಷಧ, ವೈದ್ಯಾಧಿಕಾರಿಗಳು, ವೈದ್ಯಕೀಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.